ಚೆನ್ನೈ : ಪ್ರಯಾಣಿಕರನ್ನು ಇಳಿಸುತ್ತಿದ್ದ ಸರಕಾರಿ ಬಸ್ಸಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ 5 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಈರೋಡ್ ನಲ್ಲಿ ಕಾವೇರಿಪಟ್ಟಣಂ ಬಳಿ ನಡೆದಿದೆ.
ಓಮ್ನಿ ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುಂದರೇಶ್, ಶಿವಕುಮಾರ್ ಹಾಗೂ ಬಸ್ಸಿನ ಪ್ರಯಾಣಿಕ ದೇವರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾವೇರಿ ಪಟ್ಟಣಂ ಬಳಿಯಲ್ಲಿ ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ತಮಿಳುನಾಡಿನ ಸರ್ಕಾರಿ ಬಸ್ ಗೆ ಓಮ್ನಿ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.