Supreme Court : ಜುಲೈ 31ರ ಒಳಗೆ ಒನ್ ನೇಷನ್, ಒನ್ ರೇಷನ್ ಯೋಜನೆ ಜಾರಿಗೆ‌ ಸೂಚನೆ

ನವದೆಹಲಿ : ‌ಮಹತ್ವಾಕಾಂಕ್ಷೆಯ ಒಂದು ರಾಷ್ಟ್ರ ಒಂದು ಪಡಿತರ ಯೋಜನೆಯನ್ನು ದೇಶದಾದ್ಯಂತ ಜುಲೈ 31ರ ಒಳಗೆ ಜಾರಿಗೊಳಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆಯನ್ನು ನೀಡಿದ್ದು, ವಲಸೆ ಕಾರ್ಮಿಕರಿಗೆ ಉಚಿತ ಆಹಾರ‌ ಧಾನ್ಯ ವಿತರಣೆ ಯನ್ನು ಮುಂದುವರಿಸುವಂತೆ ಸಲಹೆ ನೀಡಿದೆ.

ಕೊರೊನಾ ಎರಡನೆ ಅಲೆಯಿಂದಾಗಿ ವಲಸೆ ಕಾರ್ಮಿಕರ ಸ್ಥಿತಿ ಚಿಂತಾ ಜನಕವಾಗಿದೆ. ಈ ಹಿನ್ನೆಲೆ ಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಹಾರ ಭದ್ರತೆ ನೀಡುವುದರ ಜತೆಗೆ ಹಣಕಾಸು ನೆರವು ನೀಡಲು ಮುಂದಾಗಲೂ ಸೂಚಿಸುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್‍ ಭೂಷಣ್ ಹಾಗೂ ಎಂ.ಆರ್.ಷಾ ಅವರನ್ನೊಳ ಗೊಂಡ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ವಲಸೆ ಕಾರ್ಮಿಕರಿಗೆ ಹೆಚ್ಚು ಅನುಕೂಲಕರವಾಗಿ ರುವ  ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯನ್ನು ಜು.31ರೊಳಗೆ ಜಾರಿಗೊಳಿ ಸಬೇಕು. ಅಲ್ಲದೇ ಕೊರೊನಾ ಸೋಂಕಿನಿಂದ ಕಂಗೆಟ್ಟಿರುವ ವಲಸೆ ಕಾರ್ಮಿಕರಿಗೆ ಸಮುದಾಯ ಆಡುಗೆ ಮನೆ ನಿರ್ಮಾಣ ಮಾಡಿ ಉಚಿತ ಆಹಾರ ಒದಗಿಸುವಂತೆಯೂ ನ್ಯಾಯಾಲಯ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

Comments are closed.