ಕಲಬುರಗಿ : ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬೆನ್ನಲ್ಲೇ ಇದೀಗ ಕಲಬುರಗಿಯಲ್ಲಿಯೂ ದುರಂತ ಸಂಭವಿಸಿದೆ. ಆಕ್ಸಿಜನ್ ಸಿಗದೆ ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಕಲಬುರಗಿಯ ಅಫಜಲ್ ಪುರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ಮುಂಜಾನೆ 4 ಗಂಟೆಗೆ ಆಕ್ಸಿಜನ್ ಕೊರತೆ ಎದುರಾಗಿದೆ. ಆದರೆ ಬೆಳಗ್ಗೆ 11 ಗಂಟೆ ಸಮೀಪಿಸುತ್ತಾ ಬಂದಿದ್ದರೂ ಕೂಡ ಆಸ್ಪತ್ರೆಗೆ ಆಕ್ಸಿಜನ್ ಪೂರೈಕೆಯಾಗಿಲ್ಲ. ಇದರಿಂದಾಗೊ ರೋಗಿಗಳು ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಅಫಜಲ್ ಪುರ ತಾಲೂಕು ಆಸ್ಪತ್ರೆಯಲ್ಲಿ ಒಟ್ಟು 32 ಮಂದಿ ರೋಗಿಗಳು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ 32 ರೋಗಿಗಳು ಕೂಡ ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ.
ಆದರೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನಿರ್ಲಕ್ಷ್ಯವಹಿಸುತ್ತಿದೆ. ತಮ್ಮವರನ್ನು ಕಳೆದುಕೊಂಡಿರುವ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆತಂಕಕ್ಕೆ ಒಳಗಾಗಿದ್ದಾರೆ. ಆಕ್ಸಿಜನ್ ಇಲ್ಲದಿದ್ದರೆ ನಾವೇನು ಮಾಡೋದಕ್ಕೆ ಆಗುತ್ತೆ. ಎಲ್ಲಾ ಕಡೆಯಲ್ಲಿಯೂ ಇದೇ ಪರಿಸ್ಥಿತಿ ಇದೆ. ಗುಲ್ಬರ್ಗಾದಿಂದ ಇನ್ನಷ್ಟೇ ಆಕ್ಸಿಜನ್ ಸಿಲಿಂಡರ್ ಬರಬೇಕಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ರತ್ನಾಕರ್ ತಿಳಿಸಿದ್ದಾರೆ.
