ನವದೆಹಲಿ : ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ್ ಏರ್ ಲೈನ್ ಗೆ ಸೇರಿದ ವಿಮಾನ ಕರಾಚಿ ವಿಮಾನ ನಿಲ್ದಾಣದ ಬಳಿ ಪತನಗೊಂಡಿದೆ. ವಿಮಾನದಲ್ಲಿ 98ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಲಾಹೋರ್ ನಿಂದ ಹೊರಟಿದ್ದ ವಿಮಾನ ಕರಾಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದ್ರೆ ವಿಮಾನ ಕರಾಚಿ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಜನವಸತಿ ಪ್ರದೇಶದಲ್ಲಿ ವಿಮಾನ ಪತನವಾಗಿರುವುದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಸಾವುನೋವು ಸಂಭವಿಸಿರಬಹುದು ಎನ್ನಲಾಗುತ್ತಿದೆ.

ವಿಮಾನ ಪತನಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.