ಕುಂದಾಪುರ : ವ್ಯಕ್ತಿಯೋರ್ವ ಕುಂದಾಪುರದಲ್ಲಿ ಪಾಪಿ ಪಾಕಿಸ್ತಾನದ ಪರ ಜೈಕಾರ ಕೂಗಿದ್ದಾನೆ. ತಾಲೂಕು ಕಚೇರಿಗೆ ಆಗಮಿಸಿದ್ದ ವ್ಯಕ್ತಿ ಒಮ್ಮಿಂದೊಮ್ಮೆಲೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುವುದಕ್ಕೆ ಶುರುಮಾಡಿದ್ದಾನೆ.

ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಸುದ್ದಿಮುಟ್ಟಿಸಿದ್ದಾರೆ. ಮಾತ್ರವಲ್ಲ ತಾಲೂಕು ಕಚೇರಿಯಲ್ಲಿದ್ದ ಸಾರ್ವಜನಿಕರು ವ್ಯಕ್ತಿ ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಆದ್ರೆ ವ್ಯಕ್ತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಸ್ಥಳಕ್ಕೆ ಬಂದ ಪೊಲೀಸರ ಎದುರಲ್ಲಿಯೂ ಘೋಷಣೆ ಕೂಗಿದ್ದಾನೆ. ನಂತರ ಕುಂದಾಪುರ ಠಾಣೆಯ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
