ಶತಾಯುಷಿ, ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ ಪುಟ್ಟಪ್ಪ ಇನ್ನಿಲ್ಲ

0

ಹುಬ್ಬಳ್ಳಿ : ಹಿರಿಯ ಸಾಹಿತಿ, ನಾಡೋಜಾ ಶತಾಯುಷಿ, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರನ್ನು ಫೆಬ್ರವರಿ 10ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಹಿರಿಯ ಸಾಹಿತಿ ನಿಧನರಾಗಿದ್ದಾರೆ. ಪಾಟೀಲ ಪುಟ್ಟಪ್ಪ ಅವರು 70ನೇ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು.

ನಾಡೋಜಾ ಹಿರಿಯ ಸಾಹಿತಿ 1921ರ ಜನವರಿ 14ರಂದು ಹಾವೇರಿ ಜಿಲ್ಲೆಯ ಕುರಬಗೊಂಡದಲ್ಲಿ ಜನಿಸಿದರು. ಬ್ಯಾಡಗಿ, ಹುಬ್ಬಳ್ಳಿ, ಧಾರವಾಡದಲ್ಲಿ ವಿದ್ಯಾಭ್ಯಾಸವನ್ನು ಪೂರೈಸಿದ್ದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದ ಪಾಪು ಬೆಳಗಾವಿಯಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ.

ಮಾತ್ರವಲ್ಲ ಕ್ಯಾಪಿಪೋರ್ನಿಯಾ ವಿಶ್ವ ವಿದ್ಯಾಲಯದಿಂದ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೇರಿಕಾದಿಂದ ವಾಪಾಸಾಗುತ್ತಿದ್ದಂತೆಯೇ ನವಯುಗ ಪತ್ರಿಕೆ ತನ್ನದೇ ಸಂಪಾದತ್ವದಲ್ಲಿ ಆರಂಭಿಸಿದ್ದ ಪಾಪು, 1958ರಲ್ಲಿ ಪ್ರಪಂಚ ಪತ್ರಿಕೆಯನ್ನು ಹೊರತಂದಿದ್ದಾರೆ.

ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಪಾಟೀಲ ಪುಟ್ಟಪ್ಪ ಅವರು 1962ರಿಂದ 1978ರ ವರೆಗೆ ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಏಕೀಕರಣಕ್ಕಾಗಿ ಪಾಟೀಲ ಪುಟ್ಟಪ್ಪರು ನಡೆಸಿದ ಹೋರಾಟ ಅನನ್ಯವಾದುದು. ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಬಹುವಿಸ್ತಾರವಾಗಿ ಬೆಳೆಸುವಲ್ಲಿ ಪುಟ್ಟಪ್ಪನವರ ಪಾತ್ರ ಮಹತ್ತರವಾದುದು.

ಸಾಹಿತ್ಯ ಸಾಧನೆಗಾಗಿ ಪಾಟೀಲ ಪುಟ್ಟಪ್ಪ ಅವರಿಗೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸರಕಾರದ ಟಿಎಸ್ಆರ್ ಪತ್ರಿಕಾ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್ ಪ್ರದವಿ, ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜಾ ಪುರಸ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನಿಂದ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

Leave A Reply

Your email address will not be published.