ಬೆಂಗಳೂರು : ಕಳೆದ ಕೆಲ ವರ್ಷಗಳಿಂದಲೂ ತಮ್ಮನ್ನು ಖಾಯಂಗೊಳಿಸುವಂತೆ ಬೇಡಿಕೆಯನ್ನು ಮುಂದಿಡುತ್ತಲೇ ಬಂದಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.
ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಅನ್ನೋ ಕಲ್ಪನೆಯನ್ನು ರದ್ದುಪಡಿಸಿ ಎಲ್ಲರನ್ನೂ ಖಾಯಂಗೊಳಿಸುವ ಕುರಿತು ರಾಜ್ಯ ಸರಕಾರದ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಈ ಬದಲಾವಣೆಯನ್ನು ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, 8,000 ಉಪನ್ಯಾಸಕರ ನೇಮಕ್ಕೆ ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸುವುದರ ಜೊತೆಗೆ ವೇತನ ಹೆಚ್ಚಳಕ್ಕೂ ಕೂಡ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.