ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಡ್ತಾರಾ ನಿರ್ಮಲಾ..?

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್, ಡಿಸೇಲ್ ದರ ಇಳಿಕೆಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆ ನಡೆಸಲಿದ್ದಾರೆ.

ಪೆಟ್ರೋಲ್ ಹಾಗೂ ಡಿಸೇಲ್ ದರ ಶತಕದ ಗಡಿದಾಟಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಏರಿಕೆಯಾಗಲಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಜನಸಾಮಾನ್ಯರ ಮೇಲೆ ತೈಲ ಬೆಲೆ ಏರಿಕೆ ಗಂಭೀರವಾದ ಪರಿಣಾಮವನ್ನು ಬೀರಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಸುಂಕವನ್ನು ಇಳಿಕೆ ಮಾಡಲು ಕೇಂದ್ರ ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧಿಕಾರಿಗಳ ಜೊತೆ ನಡೆಸಲಿರುವ ಸಭೆಯಲ್ಲಿ ವಾಹನ ಸವಾರರಿಗೆ ರಿಲೀಫ್ ಸಿಗುವ ಸಾಧ್ಯತೆಯಿದೆ. ತೈಲ ಮೇಲಿನ ತೆರಿಗೆಯ ಹೊರೆ ಇಳಿಕೆಯಾಗುತ್ತೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

Comments are closed.