ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯನ್ನು 25 ಪೈಸೆ ಹೆಚ್ಚಿಸಿದರೆ, ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಈ ಮೂಲಕ ವಾಹನ ಸವಾರರಿಗೆ ತೈಲ ಬೆಲೆ ಏರಿಕೆ ಶಾಕ್ ಕೊಟ್ಟಿದೆ.
ಸ್ಥಳೀಯ ಮಾರಾಟ ತೆರಿಗೆ, ವ್ಯಾಟ್ ಮತ್ತು ಸರಕು ಶುಲ್ಕದ ಪ್ರಮಾಣವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 90.83 ರೂಪಾಯಿ ಇದ್ದರೆ, ಡೀಸೆಲ್ ದರ ಲೀಟರ್‌ಗೆ 81.32ಕ್ಕೆ ಏರಿಕೆಯಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಹೆಚ್ಚಿಸಿರೋದು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಕಾರಣವಾಗುತ್ತಿದೆ ಎನ್ನಲಾಗುತ್ತಿದೆ.