ಬೆಂಗಳೂರು : ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಹೀಗಾಗಿ ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಏರಿಕೆಯಾಗಲಿದೆ. ರಾಜ್ಯದ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ತೆರಿಗೆ ಏರಿಕೆಯಾಗೋದಾಗಿ ಘೋಷಿಸಿದ್ದಾರೆ.

ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.32ರಿಂದ 35ಕ್ಕೇ ಏರಿಕೆ ಮಾಡಲಿದ್ರೆ, ಡಿಸೇಲ್ ಮೇಲಿನ ತೆರಿಗೆ ಶೇ.21 ರಿಂದ ಶೇ.24ಕ್ಕೆ ಏರಿಕೆಯಾಗಲಿದೆ. ಹೀಗಾಗಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಗೆ 1.60 ರೂಪಾಯಿ ಹಾಗೂ ಡಿಸೇಲ್ ಬೆಲೆಯಲ್ಲಿ ಲೀಟರ್ ಗೆ 1.59 ರೂಪಾಯಿ ಏರಿಕೆಯಾಗಲಿದೆ.