ಬೆಂಗಳೂರು : ಕೊರೊನಾ ಹಿನ್ನೆಲೆ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಮೇಲೆ ಫೈರಿಂಗ್ ನಡೆಸಿದ್ದಾರೆ.

ಘಟನೆಯಲ್ಲಿ ಆರೋಪಿ ತಾಜುದ್ದೀನ್ ಕಾಲಿಗೆ ಗುಂಡೇಟು ತಲುಗಿದೆ. ನಿನ್ನೆ ಸಂಜಯನಗರದಲ್ಲಿ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಸ್ಥಳ ಮಹಜರು ನಡೆಸಲು ಕರೆದೊಯ್ದಿದ್ದ ವೇಳೆಯಲ್ಲಿ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ರೂಪಾ ಮೇಲೆಯೂ ಆರೋಪಿ ತಾಜುದ್ದಿನ್ ಹಲ್ಲೆಗೆ ಯತ್ನಿಸಿದ್ದಾನೆ.

ಇದರಿಂದಾಗಿ ಸಂಜಯ್ ನಗರ ಠಾಣೆಯ ಇನ್ಸ್ಪೆಕ್ಟರ್ ಬಾಲಾಜಿ ಅವರು ಆತ್ಮರಕ್ಷಣೆಗಾಗಿ ಆರೋಪಿ ತಾಜುದ್ದೀನ್ ಮೇಲೆ ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ತಾಜುದ್ದೀನ್ ಕಾಲಿಗೆ ಗುಂಡೇಟು ತಗುಲಿದ್ದು, ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.