ಸೋಮವಾರ, ಏಪ್ರಿಲ್ 28, 2025
HomeBreakingಸಿಂದಿಗಿಯಲ್ಲಿ ನಾಲ್ಕೈದು ಆಕಾಂಕ್ಷಿಗಳು : ಶೀಘ್ರದಲ್ಲೇ ಅಭ್ಯರ್ಥಿಯ ಆಯ್ಕೆ : ಎಚ್.ಡಿ.ಕುಮಾರಸ್ವಾಮಿ

ಸಿಂದಿಗಿಯಲ್ಲಿ ನಾಲ್ಕೈದು ಆಕಾಂಕ್ಷಿಗಳು : ಶೀಘ್ರದಲ್ಲೇ ಅಭ್ಯರ್ಥಿಯ ಆಯ್ಕೆ : ಎಚ್.ಡಿ.ಕುಮಾರಸ್ವಾಮಿ

- Advertisement -

ರಾಮನಗರ: ಸಿಂದಗಿಯಲ್ಲಿ ಉಪ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ವಿವಿಧ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿವೆ.

ಅಕ್ಟೋಬರ್ 30ರಂದು ನಡೆಯಲಿರುವ ಸಿಂದಗಿ ಉಪ ಚುನಾವಣೆಗೆ ಶೀಘ್ರದಲ್ಲೇ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: JDS : ಚುನಾವಣೆಗೆ ಸಜ್ಜಾಗುತ್ತಿದೆ ಜೆಡಿಎಸ್‌ : ಪಕ್ಷ ಸಂಘಟನಾ ಕಾರ್ಯಾಗಾರಕ್ಕೆ ಎಚ್‌ಡಿಡಿ ಚಾಲನೆ

ಬಿಡದಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಸಿಂದಗಿ ಕ್ಷೇತ್ರದಲ್ಲಿ ನಾಲ್ಕೈದು ಮಂದಿ ಟಿಕೆಟ್ ಆಕಾಂಕ್ಷಿಗಳು‌ ಇದ್ದಾರೆ. ಈ ಬಗ್ಗೆ ಅಲ್ಲಿನ ಕಾರ್ಯಕರ್ತರ ಜೊತೆ ಚರ್ಚಿಸಿದ್ದು, ಶೀಘ್ರ ತೀರ್ಮಾನ ಕೈಗೊಳ್ಳುತ್ತೇವೆ.

ಇದನ್ನೂ ಓದಿ: HDK vs Siddaramaiah : ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು : ಸಿದ್ದು ವಿರುದ್ದ ಕುಮಾರಸ್ವಾಮಿ ವಾಗ್ದಾಳಿ

ಸಾಮೂಹಿಕ ನಾಯಕತ್ವದೊಂದಿಗೆ ಉಪ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ‌ ನಯಾಜ್ ಶೇಖ್ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದರು.

(Soon candidate selection: HD Kumaraswamy)

RELATED ARTICLES

Most Popular