ಬ್ಯಾಡ್ ಮಿಂಟನ್ ತಾರೆ ಪ್ರಕಾಶ್ ಪಡುಕೋಣೆಗೆ ಕೊರೋನಾ…! ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು…!!

ಕೊರೋನಾ ಎರಡನೇ ಅಲೆಗೆ ಸೆಲೆಬ್ರೆಟಿಗಳನ್ನು ಗುರಿಯಾಗಿಸಿಕೊಂಡಂತಿದ್ದು, ಬ್ಯಾಡಮಿಂಟನ್ ದಂತಕತೆ ಖ್ಯಾತಿಯ  ಹಾಗೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಪಡುಕೋಣೆ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಕಾಶ್ ಪಡುಕೋಣೆ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ ಪತ್ನಿ ಉಜ್ವಲಾ ಹಾಗೂಎರಡನೇ ಪುತ್ರಿ ಅನೀಶಾಗೆ ಕೊರೋನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕಾಶ್ ಪಡುಕೋಣೆ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡಾಗ ಅವರಿಗೂ ಸೋಂಕು ತಗುಲಿರುವುದು ಖಚಿತಗೊಂಡಿದೆ.

ಪ್ರಕಾಶ್ ಪಡುಕೋಣೆ ಪತ್ನಿ ಹಾಗೂ ಪುತ್ರಿ ಮನೆಯಲ್ಲೇ ಹೋಂಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಪ್ರಕಾಶ್ ಪಡುಕೋಣೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕಾಶ್ ಪಡುಕೋಣೆ ಪುತ್ರಿ ಹಾಗೂ ನಟಿ ದೀಪಿಕಾ ಪಡುಕೋಣೆ ಮುಂಬೈನಲ್ಲಿ  ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆ ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಸದ್ಯ ಪ್ರಕಾಶ್ ಪಡುಕೋಣೆ ,ಪತ್ನಿ ಹಾಗೂ ಎರಡನೇ ಪತ್ನಿಗೆ ಸೋಂಕು ತಗುಲಿರುವ ಮಾಹಿತಿ ಇದ್ದು, ದೀಪಿಕಾ ಪಡುಕೋಣೆ ಹಾಗೂ ರಣವೀರ್ ಕಪೂರ್ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಪ್ರಕಾಶ್ ಪಡುಕೋಣೆ ಬ್ಯಾಡ್ ಮಿಂಟನ್ ಅಕಾಡೆಮಿ ನಿರ್ದೇಶಕರಾಗಿರುವ ಪ್ರಕಾಶ್, 1980 ಇಂಗ್ಲೆಂಡ್ ಚಾಂಪಿಯನ್ ಶಿಪ್ ಗೆದ್ದಿದ್ದರು. ಅಷ್ಟೇ ಅಲ್ಲ 1983 ರಲ್ಲಿ ವರ್ಲ್ಡ್ ಬ್ಯಾಡ್ ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು.

Comments are closed.