ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಕೊರೊನಾ ವಿರುದ್ದ ಯಾರೂ ನಿರ್ಲಕ್ಷ್ಯವನ್ನು ವಹಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಕೊರೊನಾ ಅನ್ ಲಾಕ್ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಿಂದ ದೇಶದ 80 ಕೋಟಿ ಜನರಿಗೆ ನವೆಂಬರ್ ವರೆಗೆ ಉಚಿತವಾಗಿ ಉಚಿತವಾಗಿ ರೇಷನ್ ವಿತರಿಸಲು ಕೇಂದ್ರ ಸರಕಾರ ಮುಂದಾಗಿದೆ. ಪ್ರತಿ ವ್ಯಕ್ತಿಗೆ 5 ಕೆ.ಜಿ. ಅಕ್ಕಿ ಅಥವಾ 5 ಕೆ.ಜಿ. ಗೋಧಿ ಹಾಗೂ ಪ್ರತೀ ಕುಟುಂಬಕ್ಕೆ 1 ಕೆ.ಜಿ. ಬೇಳೆಕಾಳನ್ನು ವಿತರಿಸಲಾಗುತ್ತದೆ. ಈ ಯೋಜನೆಯಿಂದ 90 ಸಾವಿರ ವೆಚ್ಚವಾಗಲಿದೆ ಎಂದಿದ್ದಾರೆ.
ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್ ಡೌನ್ ಆದೇಶವನ್ನು ಜಾರಿಗೆ ತರಲಾಗಿದೆ. ಲಾಕ್ ಡೌನ್ ವೇಳೆಯಲ್ಲಿ ಗಂಭೀರ ನಿಯಮಗಳನ್ನು ಅನುಸರಿಸಲಾಗಿದೆ. ಲಾಕ್ ಡೌನ್ ಲಕ್ಷಾಂತರ ಜನರ ಜೀವವನ್ನು ಉಳಿಸಿದೆ. ಆದರೆ ಈಗ ಇನ್ನೂ ಹೆಚ್ಚರಿಕೆಯ ಅಗತ್ಯವಿದೆ. ಆದರೆ ಈಗ ನಿಯಮ ಪಾಲನೆ ಮಾಡವರ ಸಂಖ್ಯೆ ಹೆಚ್ಚುತ್ತಿದೆ. ಒಂದು ದೇಶದ ಪ್ರಧಾನಿ 13 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ. ದೇಶದ ಪ್ರಧಾನ ಮಂತ್ರಿ ಆದರೂ ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಕೊರೊನಾ ವಿರುದ್ದ ರೂಲ್ಸ್ ಉಲ್ಲಂಘನೆ ಹೆಚ್ಚಾಗಿದೆ. ಈಗ ಸರಕಾರ, ಸ್ಥಳೀಯ ಸಂಸ್ಥೆಗಳು ನಿಯಮ ಪಾಲನೆ ಮಾಡದವರನ್ನು ಎಚ್ಚರಿಸಬೇಕಿದೆ ಎಂದಿದ್ದಾರೆ.

ಮಳೆಗಾಲ ಆರಂಭವಾಗಿದ್ದು ನೆಗಡಿ, ಜ್ವರ, ಕೆಮ್ಮು ಹೆಚ್ಚಾಗುವ ವಾತಾವರಣ ನಿರ್ಮಾಣವಾಗಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಜಾಗರೂಕತೆಯನ್ನು ವಹಿಸಬೇಕಾಗಿದೆ. ದೇಶದಲ್ಲಿ ಬಡವರು ಉಪವಾಸ ಉಳಿಯದಂತೆ ನೋಡಿಕೊಳ್ಳಬೇಕಾಗಿದೆ, ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶದ 9 ಕೋಟಿ ರೈತರ ಖಾತೆಗೆ 18,000 ಕೋಟಿ ಜಮೆ ಮಾಡಲಾಗಿದೆ ಎಂದಿದ್ದಾರೆ.