ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ..!

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಶಾಲಾರಂಭವಾಗೋದೆ ಅನುಮಾನವಾಗಿದೆ. ಈ ನಡುವಲ್ಲೇ ರಾಜ್ಯ ಸರಕಾರ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ. ಶಾಲಾ ಶುಲ್ಕ ಪಾವತಿ ಪಾವತಿ ಮಾಡಲಾಗದ ವಿದ್ಯಾರ್ಥಿಗಳನ್ನು ಅನುತೀರ್ಣ ಗೊಳಿಸುವಂತಿಲ್ಲ ಎಂದು ಸೂಚಿಸಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾರಂಭವಾಗಿಲ್ಲ. ಅದ್ರಲ್ಲೂ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ದಾಖಲು ಮಾಡಿರುವ ಪೋಷಕರು ಫೀಸ್ ಕಟ್ಟಿಲ್ಲ. ಇದರಿಂದಾಗಿ ಕೆಲವು ಖಾಸಗಿ ಶಾಲೆಗಳು ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳನ್ನು ಅನುತೀರ್ಣಗೊಳಿಸುವುದಾಗಿ ಬೆದರಿಕೆ ಹಾಕುತ್ತಿವೆ. ಆದರೆ ಶುಲ್ಕ ಕಟ್ಟದ ಕಾರಣಕ್ಕೆ ವಿದ್ಯಾರ್ಥಿಗಳನ್ನು ಅನುತೀರ್ಣಗೊಳಿಸಲು ಸಾಧ್ಯವಿಲ್ಲ. ಈ ಬಗ್ಗೆ ರಾಜ್ಯ ಸರಕಾರ ಸದ್ಯದಲ್ಲಿ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಖಾಸಗಿ ಶಾಲೆಗಳ ಒಕ್ಕೂಟದ ಆಕ್ರೋಶ !
ಶಿಕ್ಷಣ ಸಚಿವರು ಸೂಚನೆ ನೀಡುತ್ತಿದ್ದಂತೆಯೇ ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶವನ್ನು ವ್ಯಕ್ತಪಡಿಸಿದೆ. ಸರಕಾರ ಹೀಗೆ ಮಾಡಿದ್ರೆ ಶಿಕ್ಷಕರಿಗೆ ಹಾಗೂ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಷ್ಟಕರವಾಗಲಿದೆ. ಶಿಕ್ಷಣ ಸಚಿವರು ಈ ಕುರಿತ ಗೊಂದಲಗಳನ್ನು ಪರಿಹಾರ ಮಾಡದೇ ಇದ್ದಲ್ಲಿ ಆನ್ ಲೈನ್ ಕ್ಲಾಸ್ ಬಂದ್ ಮಾಡುವುದಾಗಿಯೂ ಎಚ್ಚರಿಕೆಯನ್ನು ನೀಡಿವೆ.

Comments are closed.