ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನ ಆಸ್ತಿ ತೆರಿಗೆ ಪಾವತಿಸುವವರಿಗೆ ಆಫರ್ ನೀಡಿದೆ. ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿ ವೇಳೆ ಶೇ.5ರಷ್ಟು ರಿಯಾಯಿತಿ ಪಡೆಯುವ ಅವಕಾಶವನ್ನು ಮೇ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಹೊರತುಪಡಿಸಿ ಉಳಿದೆಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ತೆರಿಗೆದಾರರಿಗೆ ಈ ಆದೇಶ ಅನ್ವಯವಾಗಲಿದೆ. ಆದರೆ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿದಾರರು ಎಪ್ರಿಲ್ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸಬೇಕಿದೆ.

ಆಸ್ತಿ ತೆರಿಗೆಯನ್ನು ಎಪ್ರಿಲ್ ತಿಂಗಳಲ್ಲಿ ಪಾವತಿ ಮಾಡುವವರಿಗೆ ಶೇ.5 ರ ರಿಯಾಯಿತಿಯನ್ನು ನೀಡಲಾಗುತ್ತಿತ್ತು. ಆದರೆ ಇದೀಗ ಲಾಕ್ ಡೌನ್ ಆದೇಶ ಜಾರಿಯಲ್ಲಿರೋದ್ರಿಂದಾಗಿ ಕಚೇರಿಗೆ ತೆರಳಿ ತೆರಿಗೆ ಪಾವತಿ ಮಾಡುವುದು ಅಸಾಧ್ಯ.

ಈ ಹಿನ್ನೆಲೆಯಲ್ಲಿ ತೆರಿಗೆಯ ಪಾವತಿಯಲ್ಲಿ ನೀಡಲಾಗುವ ರಿಯಾಯಿತಿ ಅವಧಿಯನ್ನು ವಿಸ್ತರಿಸುವಂತೆ ಸ್ಥಳೀಯ ಸಂಸ್ಥೆಗಳು ಪೌರಾಡಳಿತ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲೀಗ ರಿಯಾಯಿತಿ ಆದೇಶ ಜಾರಿಗೆ ತಂದಿದೆ.