ಮಧುರೈ : ಮಸಾಜ್ ಪಾರ್ಲರ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಬಂಧಿಸಿದ ಘಟನೆ ಮಧುರೈನಲ್ಲಿ ನಡೆದಿದೆ.
ಇಲ್ಲಿನ ನಾರಿಮೇಡು ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯುರ್ವೇದ ಮಸಾಜ್ ಸೆಂಟರ್ ನಲ್ಲಿ ಹಲವು ಸಮಯಗಳಿಂದಲೂ ವೇಶ್ಯಾವಟಿಕೆ ದಂಧೆ ನಡೆಯುತ್ತಿರುವ ಕುರಿತು ಪೊಲೀಸರಿಗೆ ದೂರುಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ತಲ್ಲಕುಲಂ ಠಾಣೆಯ ಪೊಲೀಸರು ಆಯುರ್ವೇದ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿದ್ದಾರೆ.
ಮಸಾಜ್ ಸೆಂಟರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಮಲ್ಲಪುರಂ ನಿವಾಸಿ ಮೊಹಮ್ಮದ್ ಉಸ್ಮಾನ್, ಎಸ್. ಮಹೇಶ್ ಅವರನ್ನು ಬಂಧಿಸಲಾಗಿದ್ದು, ಇಬ್ಬರು ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಇಚಾರಣೆ ನಡೆಸುತ್ತಿದ್ದಾರೆ.
ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ತಲ್ಲಕುಲಂ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.