ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳನ್ನು ಮೇ 18 ರಿಂದಲೇ ಪ್ರಾರಂಭಿಸಲು ಕ್ರಮಕೈಗೊಂಡಿದೆ.

ಮಾರ್ಚ್ 4 ರಿಂದಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮಾರ್ಚ್ ಮಾರ್ಚ್ 27ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಹೀಗಾಗಿ ಮಾರ್ಚ್ 28 ರಿಂದ ಮೇ 17ರವರೆಗೆ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಇನ್ನು ಮುಂದಿನ ವರ್ಷದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆಗಳು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡ ಮರುದಿನದಿಂದಲೇ ಆರಂಭಗೊಳ್ಳಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.