ಕೊನೆಗೂ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ : ಮಾರ್ಚ್ 31ರ ನಂತರ ನಡೆಯಲಿದೆ ಪರೀಕ್ಷೆ

0

ಬೆಂಗಳೂರು : ನಾಳೆ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ನಾಳೆ ಇಂಗ್ಲೀಷ್ ಭಾಷೆಯ ಪರೀಕ್ಷೆ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಿದ್ದು, ಸಂಚಾರ ವ್ಯವಸ್ಥೆಯನ್ನು ಬಂದ್ ಮಾಡಲಾಗಿತ್ತು. ಇದರಿಂದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಸಮಸ್ಯೆ ಉಂಟಾಗುವ ಸಾಧ್ಯತೆಯಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡಕ್ಕೆ ಮಣಿದು ಸರಕಾರ ಇದೀಗ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಇಂಗ್ಲೀಷ್ ಪರೀಕ್ಷೆ ಮಾರ್ಚ್ 31ರ ನಂತರ ಪರೀಕ್ಷಾ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Leave A Reply

Your email address will not be published.