ಬೆಂಗಳೂರು : ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಹೊರಡಿಸಲಾಗಿದೆ. ಅಲ್ಲದೇ ನಾಳೆ ರಾಜ್ಯದಾದ್ಯಂತ ಸಾರಿಗೆ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಸಾಧ್ಯತೆಯಿದೆ.

ನಾಳೆ ರಾಜ್ಯ ಸಂಪೂರ್ಣ ಬಂದ್ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಸಭೆಯ ನಂತರದಲ್ಲಿ ಪಿಯುಸಿ ಪರೀಕ್ಷೆಗಳನ್ನು ಮೂಂದೂಡಿಕೆ ಮಾಡೋ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಒಂದೊಮ್ಮೆ ಪರೀಕ್ಷೆಯನ್ನು ನಡೆಸೋದೇ ಆದ್ರೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ವ್ಯವಸ್ಥೆ ಕಲ್ಪಿಸಬೇಕಿದೆ.