ಬೈಂದೂರು : ತಾಯಿ ಹಾಲು ತರಲು ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.
ಶ್ವೇತಾ (17 ವರ್ಷ) ಮೃತ ದುರ್ದೈವಿ. ಉಪ್ಪುಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಕೃತ್ಯವನ್ನೆಸಗಿದ್ದಾಳೆ.
ಕಲಿಕೆಯಲ್ಲಿ ಹಿಂದುಳಿದಿದ್ದು, ಇದೇ ವಿಚಾರದಲ್ಲಿಯೇ ಶ್ವೇತಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗುತ್ತಿದೆ. ಆದರೆ ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲು ಮಾಡಿಕೊಂಡಿರುವ ಬೈಂದೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.