ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡುವ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ. ಇದರ ಎಸ್ಎಸ್ಎಲ್ ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರ ಮೇಲೆ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿರುವ ಶಿಕ್ಷಣ ಇಲಾಖೆ ಇದೀಗ ಫಲಿತಾಂಶ ಪ್ರಕಟಿಸಲು ಸಂಬಂಧಿಸಿದಂತೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ರಾಜ್ಯದ ಎಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ 2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ದಾಖಲಾಗಿರುವ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯನ್ನು ಎಸ್ಎಟಿಎಸ್ ಪೋರ್ಟಲ್ ನಲ್ಲಿ ಜೂನ್ 15ರ ಒಳಗಾಗಿ ಮಾಹಿತಿಗಳನ್ನು ಅಪ್ಲೋಡ್ ಮಾಡುವಂತೆ ಕಾಲೇಜುಗಳ ಪ್ರಾಂಶುಪಾಲರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಜೂನ್ 8ರಿಂದ ದಾಖಲೆಗಳನ್ನು ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಜೂನ್ 15 ಕೊನೆಯ ದಿನವಾಗಿದೆ. ಪ್ರಥಮ ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಅಂಕಗಳನ್ನು ವಿಷಯವಾರು ನೋಂದಣಿ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ.

Comments are closed.