ಪುತ್ತೂರಿನ ಪ್ರತಿಷ್ಠಿತ ಫಾರ್ಮ ಹೌಸ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರ ..!

ಪುತ್ತೂರು : ಆಕೆಯ ಸ್ನೇಹಿತ ವರ್ಗಾವಣೆಯ ಹಿನ್ನೆಲೆಯಲ್ಲಿ ಫಾರ್ಮ್ ಹೌಸ್ ನಲ್ಲಿ ಪಾರ್ಟಿಯನ್ನು ಆಯೋಜಿಸಿದ್ದ. ಪಾರ್ಟಿ ಮುಗಿದು ಫಾರ್ಮ್ ಹೌಸ್ ನಲ್ಲಿ ಉಳಿದುಕೊಂಡಿದ್ದ ಯುವತಿಯ ಮೇಲೆ ಪಾರ್ಟಿಗೆ ಬಂದಿದ್ದಾತ ಅತ್ಯಾಚಾರವೆಸಗಿದ್ದಾನೆ. ಯುವತಿಯ ದೂರಿನ ಹಿನ್ನೆಲೆಯಲ್ಲೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಹೌದು, ಈ ಘಟನೆ ನಡೆದಿರೋದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿಯ ಪ್ರತಿಷ್ಠಿತ ಫಾರ್ಮ್ ಹೌಸ್ ನಲ್ಲಿ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಅಂಡಮಾನ್ ಗೆ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಫಾರ್ಮ್ ಹೌಸ್ ನಲ್ಲಿ ಪಾರ್ಟಿಯೊಂದನ್ನು ಆಯೋಜಿಸಿದ್ದ. 20ಕ್ಕೂ ಅಧಿಕ ಮಂದಿ ಸೇರಿಕೊಂಡು ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ಆದರೆ ಪಾರ್ಟಿ ಮುಗಿಯುವಾಗಲೇ ತಡರಾತ್ರಿಯಾಗಿತ್ತು.

ಹೀಗಾಗಿ ಪಾರ್ಟಿಯಲ್ಲಿ ಬಾಗಿಯಾಗಿದ್ದ ಮಂಗಳೂರಿನ ಬ್ಯಾಂಕ್ ವೊಂದರಲ್ಲಿ ಉದ್ಯೋಗಿಯಾಗಿರುವ ಜಾರ್ಖಂಡ್ ಮೂಲದ ಯುವತಿ ಹಾಗೂ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾ ಸೇರಿದಂತೆ ಒಟ್ಟು ನಾಲ್ಕು ಮಂದಿ ಫಾರ್ಮ್ ಹೌಸ್ ನಲ್ಲಿಯೇ ಉಳಿದುಕೊಂಡಿದ್ದರು.

ಆದರೆ ಮುಂಜಾನೆಯ ವೇಳೆಯಲ್ಲಿ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಅಂತಾ ಯುವತಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತನನ್ನು ಬಂಧಿಸಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸುತ್ತಿದ್ದಾರೆ.

Comments are closed.