ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆಯನ್ನು ಮಾಡಲಾಗಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ಮಾಡಲು ಸರಕಾರ ತೀರ್ಮಾನಿಸಿದೆ.

ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆಯೇ ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಕ್ವಾರಂಟೈನ್ ಹಾಗೂ 7 ದಿನ ಹೋಮ್ ಕ್ವಾರಂಟ್ ಹಾಗೂ ಉಳಿದ ರಾಜ್ಯದಿಂದ ಬಂದವರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ವಿಧಿಸಲು ಸರಕಾರ ಮುಂದಾಗಿತ್ತು. ಆದರೆ ರಾಜ್ಯ ಸರಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆಗಳನ್ನು ಮಾಡುತ್ತಿದ್ದಂತೆಯೇ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರತೆ ಹೆಚ್ಚಳವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಮತ್ತೆ ಆರಂಭದಲ್ಲಿ ಜಾರಿಯಲ್ಲಿದ್ದ 14 ದಿನಗಳ ಕ್ವಾರಂಟೈನ್ ನಿಯಮವನ್ನು ಜಾರಿಗೆ ತಂದಿದೆ.

ಕೇವಲ ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರವಲ್ಲ, ಯಾವುದೇ ರಾಜ್ಯದಿಂದ ಬಂದವರು ಕೂಡ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಲೇ ಬೇಕು ಎಂದು ರಾಜ್ಯ ಸರಕಾರ ಹೇಳಿದೆ. ಕ್ವಾರಂಟೈನ್ ನಿಯಮಗಳಲ್ಲಿ ಬದಲಾವಣೆ ಮಾಡುವುದಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿಗೆಯನ್ನು ನೀಡಿದ್ದು, ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.