ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ : ಸೋಂಕು ಹೆಚ್ಚಳ ಬೆನ್ನಲ್ಲೇ ರಾಜ್ಯ ಸರಕಾರ ಮಹತ್ವದ ತೀರ್ಮಾನ

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಬೆನ್ನಲ್ಲೇ ರಾಜ್ಯ ಸರಕಾರ ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಸರಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕ್ವಾರಂಟೈನ್ ಅವಧಿಯನ್ನು 14 ದಿನಗಳಿಂದ 7 ದಿನಕ್ಕೆ ಕಡಿತ ಮಾಡಿತ್ತು. ಆದರೆ ರಾಜ್ಯದಲ್ಲಿ ಕಳೆದೊಂದು ವಾರದಿಂದಲೂ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದ್ರಲ್ಲೂ ಮಹಾರಾಷ್ಟ್ರದಿಂದ ಬಂದವರಿಂದಲೇ ಸೋಂಕು ವ್ಯಾಪಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ವಾರಂಟೈನ್ ಅವಧಿಯನ್ನು ಮತ್ತೆ ಹೆಚ್ಚಳ ಮಾಡಿದೆ.

ಮಹಾರಾಷ್ಟ್ರದಿಂದ ಬಂದವರಿಗೆ ಕಡ್ಡಾಯ 14 ದಿನಗಳ ಕ್ವಾರಂಟೈನ್ ಹಾಗೂ ಇತರ ರಾಜ್ಯಗಳಿಂದ ಬಂದವರಿಗೆ 7 ದಿನ ಕ್ವಾರಂಟೈನ್ ಹಾಗೂ 7 ದಿನ ಸಾಂಸ್ಥಿಕ ಕ್ವಾರಂಟೈನ್ ವಿಧಿಸಲು ನಿರ್ಧರಿಸಲಾಗಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.