- Advertisement -
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಳಕು ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಒಮ್ಮಿಂದೊಮ್ಮೆಲೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಡಾ.ರಾಜ್ ಕುಮಾರ್ ಕುಟುಂಬಸ್ಥರು ಆಗಮಿಸಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.