ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಸಂಕಷ್ಟ : ರಾಗಿಣಿ ಸೇರಿ 5 ಆರೋಪಿಗಳ ಜಾಮೀನು ಅರ್ಜಿ ಮುಂದೂಡಿಕೆ

0

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ವಶದಲ್ಲಿರುವ ರಾಗಿಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಡ್ರಗ್ಸ್ ದಂಧೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸೆ. 16 ಕ್ಕೆ ಮುಂದೂಡಿಕೆಯಾಗಿದೆ.

ನಟಿ ರಾಗಿಣಿ, ಶಿವಪ್ರಕಾಶ್, ವಿನಯ್ ಕುಮಾರ್, ವೈಭವ್ ಶೆಟ್ಟಿ ಮತ್ತು ರಾಹುಲ್ ಅವರ ಜಾಮೀನು ಅರ್ಜಿಯನ್ನು ಸೆ. 16 ಕ್ಕೆ ಮುಂದೂಡಿ ಎನ್ ಡಿಪಿಎಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಂತಯೇ ರಾಗಿಣಿ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ಸಪ್ಟೆಂಬರ್ 14ಕ್ಕೆ ಮುಂದೂಡಿಕೆ ಮಾಡಿತ್ತು. ಇದೀಗ ಮತ್ತೆ ಜಾಮೀನು ಅರ್ಜಿ ಮುಂದೂಡಿಕೆಯಾಗಿರುವ ಹಿನ್ನೆಲೆಯಲ್ಲಿ ರಾಗಿಣಿ ಜೈಲು ಸೇರುವುದು ಬಹುತೇಕ ಖಚಿತವಾಗಿದೆ.

Leave A Reply

Your email address will not be published.