ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಜೈಲು ಸೇರಿದ ಮೊದಲ ನಟಿ ಅನ್ನೋ ಅಪಖ್ಯಾತಿಗೆ ಪಾತ್ರರಾಗಿದ್ದಾರೆ.

ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಬ್ಬರನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದರು.ಈ ವೇಳೆ ಸಿಸಿಬಿ ಪೊಲೀಸರು ಮತ್ತೆ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇನ್ನು ರಾಗಿಣಿ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಗಿತ್ತು. ಆದರೆ ಸರ್ಕಾರಿ ವಕೀಲರು ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಸಪ್ಟೆಂಬರ್ 16ಕ್ಕೆ ಮುಂದೂಡಿದೆ
ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ದ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್‌ಸ್ಟೆನ್ಸಸ್ (ಎನ್‍ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ.
ಕೋರ್ಟ್‌ಗೆ ಹಾಜರು ಪಡಿಸುವ ಮುನ್ನ ಆರೋಪಿಗಳಾದ ರಾಗಿಣಿ, ಸಂಜನಾಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೋವಿಡ್ 19 ಪರೀಕ್ಷೆ ನಡೆಸಲಾಯಿತು. ಇಬ್ಬರ ವರದಿ ನೆಗೆಟಿವ್ ಬಂದಿತ್ತು. ನಟಿಯರಿಬ್ಬರು ಜೈಲು ಸೇರುತ್ತಿರುವ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.