ಮಾಜಿ ಸಚಿವರ ರಾಸಲೀಲೆ ಸಿಡಿ ಪ್ರಕರಣ : ನರೇಶ್ ಗೌಡ, ಶ್ರವಣ್ ಗೆ ಜಾಮೀನು ಮಂಜೂರು

ಬೆಂಗಳೂರು : ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನರೇಶ್ ಗೌಡ ಹಾಗೂ ಶ್ರವಣ್ ಗೆ ಬೆಂಗಳೂರಿನ 91ನೇ ಸಿಸಿಎಚ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ರಾಸಲೀಲೆಯನ್ನು ನರೇಶ್ ಗೌಡ ಹಾಗೂ ಶ್ರವಣ್ ಸೆರೆ ಹಿಡಿದು ಸಿಡಿ ಮಾಡಿದ್ದಾರೆ. ಅಲ್ಲದೇ ತನ್ನನ್ನ ಹನಿ ಟ್ರ್ಯಾಪ್ ಗೆ ಒಳಪಡಿಸಲಾಗಿದೆ ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ರಾಸಲೀಲೆ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ನರೇಶ್ ಗೌಡ ಹಾಗೂ ಶ್ರವಣ್ ತಲೆಮರೆಯಿಸಿಕೊಂಡಿದ್ದರು.

ನಂತರದಲ್ಲಿ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ಪೊಲೀಸರ ಮುಂದೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಳು. ಅಲ್ಲದೇ ತನ್ನನ್ನು ಮಾಜಿ ಸಚಿವರು ದೈಹಿಕವಾಗಿ ಬಳಸಿಕೊಂಡಿದ್ದಾರೆ ಅಂತಾ ಆರೋಪ ಮಾಡಿದ್ದಳು. ಇದರ ಬೆನ್ನಲ್ಲೇ ಜಾರಕಿಹೊಳಿ ಅವರು ತಾನು ಯುವತಿಯೊಂದಿಗೆ ಸಮ್ಮತಿಯಿಂದ ಸೆಕ್ಸ್ ನಡೆಸಿರುವುದಾಗಿಯೂ ಸಿಸಿಬಿ ಅಧಿಕಾರಿಗಳ ಮುಂದೆ ಹೇಳಿಕೆಯನ್ನು ನೀಡಿದ್ದರು.

ಇನ್ನೊಂದೆಡೆ ಮಾರ್ಚ್ 2 ರಿಂದ ತಲೆ ಮರೆಯಿಸಿಕೊಂಡಿದ್ದ ಸಿಡಿ ಪ್ರಕರಣದ ಕಿಂಗ್ ಪಿನ್ ನರೇಶ್ ಗೌಡ ಹಾಗೂ ಶ್ರವಣ್ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Comments are closed.