ಬೆಂಗಳೂರು : ಕುಖ್ಯಾತ ಭೂಗತ ಪಾತಕಿ ರವಿಪೂಜಾರಿಯನ್ನು ಮಾರ್ಚ್ 7ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
2019ರಲ್ಲಿ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಪಾತಕಿ ರವಿ ಪೂಜಾರಿಯನ್ನು ತಡರಾತ್ರಿ ಬೆಂಗಳೂರಿಗೆ ಕರೆತಂದಿರೋ ಸಿಸಿಬಿ ಪೊಲೀಸರು ಬೆಂಗಳೂರಿನ ಒಂದನೇ ಎಂಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಭೂಗತ ಪಾತಕಿ ದೇಶದಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, 90ಕ್ಕೂ ಅಧಿಕ ಪ್ರಕರಣಗಳು ಈತನ ಮೇಲಿದೆ. ಹೀಗಾಗಿ 15 ದಿನಗಳ ಕಾಲ ರವಿ ಪೂಜಾರಿಯನ್ನು ವಶಕ್ಕೆ ನೀಡುವಂತೆ ಸಿಸಿಬಿ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ರವಿ ಪೂಜಾರಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ರವಿ ಪೂಜಾರಿಗೆ ಹೃಯದ ಸಂಬಂಧಿ ಕಾಯಿಲೆಯಿದ್ದು ಚಿಕಿತ್ಸೆ ಅಗತ್ಯವಿರುವುದರಿಂದ ಪೊಲೀಸ್ ವಶಕ್ಕೆ ನೀಡಬಾರದು ಅಂತಾ ಹೇಳಿದ್ದಾರೆ. ಈ ಬಗ್ಗೆ ವಾದ ವಿವಾದ ಆಲಿಸಿದ ಒಂದನೇ ಎಂಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದ ಜಗದೀಶ್ ಅವರು ಮಾರ್ಚ್ 7ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಇನ್ನು ನ್ಯಾಯಾಧೀಶರು ಆದೇಶ ಹೊರಡಿಸುವಾಗ ತಲೆಯಲ್ಲಿದ್ದ ಟೊಪ್ಪಿಯನ್ನು ತೆಗೆದಿದ್ದ ರವಿ ಪೂಜಾರಿ ನ್ಯಾಯಾಧೀಶರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾನೆ.
ಭೂಗತ ಪಾತಕಿ ರವಿ ಪೂಜಾರಿ ಮಾ.7ರ ವರೆಗೆ ಪೊಲೀಸ್ ಕಸ್ಟಡಿಗೆ
- Advertisement -