ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ತಾಂತ್ರಿಕ ಸಮಿತಿ ಶಾಲೆಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಇನ್ನೊಂದೆಡೆ ಶಿಕ್ಷಣ ಇಲಾಖೆ ಕೂಡ ಶಾಲಾರಂಭಕ್ಕೆ ಸಿದ್ದತೆಯನ್ನು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಶನಿವಾರ ಮಧ್ಯಾಹ್ನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಿದ್ದಾರೆ. ಆರಂಭಿಕ ಹಂತದಲ್ಲಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ. ಸ್ಥಿತಿಗತಿಗಳನ್ನು ಅವಲೋಕಿಸಿದ ನಂತರದಲ್ಲಿ ಉಳಿದ ತರಗತಿಗಳನ್ನು ಪ್ರಾರಂಭಿಸುವ ಕುರಿತು ಚಿಂತನೆ ನಡೆಯಲಿದೆ.
ಶಾಲೆ – ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈಗಾಗಲೇ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇನ್ನೊಂದೆಡೆ ಶಿಕ್ಷಣ ಇಲಾಖೆ ಪರಿಷ್ಕತವಾಗಿ ವಿದ್ಯಾಗಮ ಯೋಜನೆಯನ್ನು ಜನವರಿ 1ರಿಂದಲೇ ಜಾರಿಗೆ ತರಲು ಮುಂದಾಗಿದೆ. ಈ ನಿಟ್ಟಿನಲ್ಲಿಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಯಲಿದೆ.