ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನಚವಿಧಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಆದೇಶಿಸಿದೆ.

ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದೆ.

ರಿಯಾ ಮತ್ತು ಶೋಯಿಕ್ ಚಕ್ರವರ್ತಿ ಅವರು ಎನ್‌ಡಿಪಿಎಸ್ ಪ್ರಕರಣದಲ್ಲಿ ಜಾಮೀನು ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿ ದ್ದಾರೆ. ಇದು ಸೆಪ್ಟೆಂಬರ್ 23 ರಂದು ವಿಚಾರಣೆಗೆ ಬರಲಿದೆ. ವಿಚಾರಣೆಯ ನಂತರ ಅರ್ಜಿಗಳ ವಿವರಗಳನ್ನು ಹಂಚಿಕೊಳ್ಳಲಾಗು ವುದು” ಎಂದು ರಿಯಾ ಸೋದರನ ಪರ ವಕೀಲ ಸತೀಶ್ ಮನೆಶಿಂಧೆ ತಿಳಿಸಿದ್ದಾರೆ. .