ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಬಂಧನ ಕ್ಕೊಳಗಾಗಿದ್ದಾರೆ. ಇದೀಗ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ರಿಯಾ ಚಕ್ರವರ್ತಿಯನ್ನು ಕಳೆದ ಮೂರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಎನ್ ಸಿಬಿ ಅಧಿಕಾರಿಗಳು ಕೊನೆಗೂ ಬಂಧಿಸಿ ದ್ದಾರೆ. ರಿಯಾ ಚಕ್ರವರ್ತಿಯ ಆರೋಗ್ಯ ತಪಾಸಣೆಯನ್ನು ನಡೆಸಿದ ಎನ್ ಸಿಬಿ ಅಧಿಕಾರಿಗಳು ವಿಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ರಿಯಾ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ನ್ಯಾಯಾಂಗ ಬಂಧನ ವಿಧಿಸಿದೆ.

ರಿಯಾ ಚಕ್ರವರ್ತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನಟಿ ರಿಯಾ ಚಕ್ರವರ್ತಿ ಡ್ರಗ್ಸ್ ಮಾಫಿಯಾದ ಜೊತೆಗೆ ನಂಟು ಹೊಂದಿದ್ದು, ತನ್ನ ಗೆಳೆಯ ಸುಶಾಂತ್ ಸಿಂಗ್ ಗಾಗಿಯೇ ಡ್ರಗ್ಸ್ ಸಂಗ್ರಹಿಸಿದ್ದಾಳೆ. ಈಗಾಗಲೇ ಆರೋಪಿಯನ್ನು ವಿಚಾರಣೆ ನಡೆಸಲಾಗಿದೆ.

ಹೀಗಾಗಿ ತನ್ನ ವಶಕ್ಕೆ ಪಡೆಯುವ ಅಗತ್ಯವಿಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಿದೆ. ಹೀಗಾಗಿ ನ್ಯಾಯಾಲಯ ರಿಯಾ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.