ಡಿ ಬಾಸ್ ಗೆ ಭರ್ಜರಿ ಗೆಲುವು : ತೆಲುಗಿನಲ್ಲೂ ರಿಲೀಸ್ ಆಗುತ್ತೆ ರಾಬರ್ಟ್

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್ ಬಿಡುಗಡೆ ಎದುರಾಗಿದ್ದ ಎಲ್ಲಾ ಆತಂಕವೂ ದೂರವಾಗಿದೆ. ಹೀಗಾಗಿ ಮಾರ್ಚ್ 11ರಂದು ತೆಲುಗಿನಲ್ಲಿಯೂ ರಾಬರ್ಟ್ ಅಬ್ಬರಿಸಲಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಗೆ ತೆಲುಗು ಸಿನಿಮಾ ನಿರ್ಮಾಪಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ದಕ್ಷಿಣ ಭಾರತ ಫಿಲಂ ಚೇಂಬರ್ಸ್ ಗಮನಕ್ಕೆ ತಂದಿದ್ದು, ಇದೀಗ ಸಿನಿಮಾ ಬಿಡುಗಡೆಗೆ ಒಪ್ಪಿಗೆ ಲಭಿಸಿದೆ.

ಹೀಗಾಗಿ ಮಾರ್ಚ್ 11ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಾಬರ್ಟ್ ರಿಲೀಸ್ ಆಗಲಿದೆ. ತೆಲುಗಿನಲ್ಲಿ ರಾಬರ್ಟ್ ಬಿಡುಗಡೆಗೆ ದಕ್ಷಿಣ ಭಾರತ ಫಿಲ್ಮ್ ಛೇಂಬರ್ ಸಭೆಯಲ್ಲಿ ಒಪ್ಪಿಗೆ ದೊರಕಿದ್ದು, ಸುಮಾರು 100 ಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Comments are closed.