Actor Chetan ಬ್ರಾಹ್ಮಣರ ವಿರುದ್ಧ ಹೇಳಿಕೆ ಪ್ರಕರಣ….! ಸಚಿವರ ವಿರುದ್ಧವೇ 1 ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿ ನಟ ಚೇತನ್…!!

ಬೆಂಗಳೂರು: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ನಟ ಚೇತನ್, ಇದೀಗ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಸಚಿವರ ವಿರುದ್ಧ ಸಮರ ಸಾರಿದ್ದಾರೆ.  ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ವಿರುದ್ಧ ಚೇತನ್ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಚೇತನ್ ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ತನಗೆ ಒಂದು ರೂಪಾಯಿ ಪರಿಹಾರ ನೀಡಬೇಕು ಹಾಗೂ ಸಚಿವ ಹೆಬ್ಬಾರ್ ಅವರು ಬೇಷರತ್ತಾಗಿ ಕ್ಷಮೆ ಕೋರಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನಗರದ ಸಿಟಿಸಿವಿಲ್ ನ್ಯಾಯಾಲಯ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 14 ಕ್ಕೆ  ಮುಂದೂಡಿದೆ.

ಚೇತನ್ ಬ್ರಾಹ್ಮಣರ ಕುರಿತು ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದ  ಸಚಿವ ಶಿವರಾಂ ಹೆಬ್ಬಾರ್, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ  ಪ್ರತಿಯೊಂದು ಜಾತಿ,ಧರ್ಮಗಳಿಗೆ  ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು. ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತದ್ದು.

https://www.facebook.com/261810094357404/posts/1001300417075031/

ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜಿ ಕಾಸಿನ ಆಸೆಗೋ  ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ  ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು  ಸನ್ಮಾನ್ಯ ಮುಖ್ಯಮಂತ್ರಿಗಳಾದ  ಬಿ.ಎಸ್.ಯಡಿಯೂರಪ್ಪನವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದರು.

ಸಚಿವ ಶಿವರಾಂ ಹೆಬ್ಬಾರ್ ಈ ಪೋಸ್ಟ್ ವಿರುದ್ಧ ಚೇತನ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದಕ್ಕೂ ಮುನ್ನ  ಚೇತನ್ ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣತ್ವ ಭಯೋತ್ಪಾದಕತ್ವ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ  ಕ್ಷಮೆಯಾಚನೆಗೆ ಆಗ್ರಹಿಸಿ  ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಹಲವು ಬ್ರಾಹ್ಮಣ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದವು.

Comments are closed.