ತುಮಕೂರು : ಕೇಂದ್ರ ಸರಕಾರ ಹಾಗು ಎಪಿಎಂಸಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಂಗನಾ ರಾಣಾವತ್ ವಿರುದ್ದ ಇದೀ ಅನ್ನದಾತರು ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲೀಗ ತುಮಕೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಕಂಗನಾ ವಿರುದ್ದ ದೂರು ದಾಖಲಾಗಿದೆ.

ರೈತರನ್ನ ಭಯೋತ್ಪಾದಕರಿಗೆ ಹೋಲಿಸಿದ್ದಾರೆಂದು ನಟಿ ಕಂಗನಾ ವಿರುದ್ಧ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ಕಂಗನಾ ಹೇಳಿಕೆಯಿಂದ ಆಕ್ರೋಶಗೊಂಡ ಹೈಕೋರ್ಟ್ ವಕೀಲ ರಮೇಶ್ ನಾಯಕ್, ಐಪಿಸಿ ಸೆಕ್ಷನ್ 44,108,153,153A ಹಾಗು 504 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ವಕೀಲರಾದ ರಮೇಶ್ ನಾಯಕ್ ಅವರು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳದ ಹಿನ್ನೆಲೆಯಲ್ಲಿ ನೇರವಾಗಿ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ.

ಇದೀಗ ನ್ಯಾಯಾಲಯ ಅನುಮತಿ ನೀಡಿದ್ದಲ್ಲಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.
