ಲಗ್ನಪತ್ರಿಕೆ ಧಾರವಾಹಿಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸ್ಯಾಂಡಲ್ ವುಡ್ ಹಿರಿಯ ನಟ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ.

ಧಾರವಾಹಿಯ ಚಿತ್ರೀಕರಣದ ವೇಳೆಯಲ್ಲಿಯೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಎದೆನೋವು ಹೆಚ್ಚಿದ್ದರಿಂದಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲಿ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಚಿಕ್ಕಮಗಳೂರು ಮೂಲದ ಕೃಷ್ಣ ನಾಡಿಗ್ ಅವರು ಸುಮಾರು 50 ವರ್ಷಗಳಷ್ಟು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅವರ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದು ನಿರ್ಮಾಣ ನಿರ್ವಹಿಸಿ ಖಾಸಗಿ ಸುದ್ದಿ ವಾಹಿನಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ಜಗತ್ತನ್ನು ಪರಿಚಯಿಸುತ್ತಿದ್ದರು.

ಜೊತಗೆ ಕನ್ನಡದ ಹಲವು ಧಾರವಾಹಿಗಳಲ್ಲಿ ಕೃಷ್ಣಮೂರ್ತಿ ನಾಡಿಗ ನಟಿಸಿದ್ದರು. ಧಾರವಾಹಿ ಮಾತ್ರವಲ್ಲದೇ ಪೈಲ್ವಾನ್, ಆದಿ ಲಕ್ಷ್ಮೀ ಪುರಾಣ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೃಷ್ಣ ನಾಡಿಗ್ ಅವರು ನಟಿಸಿದ್ದರು.