ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ರಾಗಿಣಿ, ಸಂಜನಾಗೆ ಜೈಲೇ ಗತಿ

0

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ನಟಿಯರಿಗೆ ಸದ್ಯಕ್ಕೆ ಜೈಲು ಫಿಕ್ಸ್ ಆಗಿದೆ.

ಡ್ರಗ್ಸ್ ಪ್ರಕರಣ ಸಂಜನಾ ಹಾಗೂ ರಾಗಿಣಿಗೆ ಮಗ್ಗಲು ಮುಳ್ಳಾಗಿದೆ. ಸಿಸಿಬಿ ವಿಚಾರಣೆಯ ಬೆನ್ನಲ್ಲೇ ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿಯರಿಬ್ಬರು ಜಾಮೀನು ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದರು. ಆದ್ರೆ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.

ಈ ಹಿಂದೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ರಾಗಿಣಿ ಸಿಸಿಬಿ ವಿಚಾರಣೆಯ ಬೆನ್ನಲ್ಲೇ ಮತ್ತೊಮ್ಮೆ ಜಾಮೀನುಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಅಲ್ಲದೇ ಸಂಜನಾ ಗಲ್ರಾನಿ ಕೂಡ ನ್ಯಾಯಾಧೀಶರ ಬಳಿಯಲ್ಲಿ ಜಾಮೀನು ನೀಡುವಂತೆ ಪರಿ ಪರಿಯಾಗಿ ಬೇಡಿಕೊಂಡಿದ್ದರು. ಆದ್ರೆ ನ್ಯಾಯಾಧೀಶರು ಮಾತ್ರ ನಟಿಯರಿಬ್ಬರಿಗೆ ಜಾಮೀನು ನೀಡುವುದಕ್ಕೆ ಒಪ್ಪಿಗೆಯನ್ನು ನೀಡಿಲ್ಲ.

ಎನ್ ಡಿಪಿಎಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆಯೇ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರು ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಇನ್ನು ಡ್ರಗ್ಸ್ ಪ್ರಕರಣದ ಆರೋಪಿಗಳಾಗಿರುವ ರವಿಶಂಕರ್, ಪ್ರಶಾಂತ್ ರಂಕಾ, ಅಭಿಸ್ವಾಮಿ, ವೈಭವ್ ಚೈನ್ ಮತ್ತು ಪ್ರಶಾಂತ್ ರಾಜು ಜಾಮೀನು ಅರ್ಜಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಲಾಗಿದೆ. ವಿರೇನ್ ಖನ್ನ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 1ಕ್ಕೆ ನ್ಯಾಯಾಲಯ ಮುಂದೂಡಿಕೆ ಮಾಡಿದೆ.

Leave A Reply

Your email address will not be published.