ಬೆಂಗಳೂರು : ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ದಿನೇಶ್ ಗಾಂಧಿ ನಿಧನರಾಗಿದ್ದಾರೆ. ಇಂದು ಮುಂಜಾನೆಯ ವೇಳೆಯಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಬಾರದ ಲೋಕಕ್ಕೆ ಪಯಣಿಸಿದ್ದಾರೆ.

52 ವರ್ಷ ವಯಸ್ಸಿನ ನಿರ್ಮಾಪಕ ದಿನೇಶ್ ಗಾಂಧಿ ಅವರು ಕಿಚ್ಚ ಸುದೀಪ್ ಅಭಿನಯದ ವೀರಮದಕರಿ, ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಹೂ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡದ್ದ ದಿನೇಶ್ ಗಾಂಧಿ, ದಳಪತಿ ಹಾಗೂ ನರಸಿಂಹ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು.

ನಿರ್ಮಾಪಕ ದಿನೇಶ್ ಗಾಂಧಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಶ್ರದ್ದಾಂಜಲಿ ಕೋರಿದ್ದಾರೆ.