ಸ್ಯಾಂಡಲ್ ವುಡ್ ಡ್ರಗ್ ಕೇಸ್ : 140 ದಿನಗಳ ಬಳಿಕ ನಟಿ ರಾಗಿಣಿಗೆ ಜಾಮೀನು ಮಂಜೂರು

ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ್ದಂತ ನಟಿ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾದ ನಟಿ ರಾಗಿಣಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಪ್ರಕರಣದಲ್ಲಿ ಹಲವು ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ನಟಿ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ 140 ದಿನಗಳ ಬಳಿಕ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸಂಜನಾ ಗರ್ಲಾನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಪ್ರಕರಣದಲ್ಲಿ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಸಿಬಿ ಪರ ವಕೀಲರು ಜಾಮೀನು ಮಂಜೂರು ಮಾಡದಂತೆ ನ್ಯಾಯಾಲಯಕ್ಕೆ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಗಿಣಿ ದ್ವಿವೇದಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿತ್ತು.

Comments are closed.