ತುಪ್ಪದ ಬೆಡಗಿಯ ಬಿಡುಗಡೆ ಸಧ್ಯಕ್ಕಿಲ್ಲ….! ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್…!!

ಸ್ಯಾಂಡಲ್ ವುಡ್ ನ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಜೈಲುವಾಸ ಇನ್ನಷ್ಟು ದಿನ ಮುಂದುವರೆಯುವುದು ಖಚಿತವಾಗಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸಪ್ಟೆಂಬರ್ 3 ರಂದು ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ರಾಗಿಣಿ ದ್ವಿವೇದಿ ಸದ್ಯ ಪರಪ್ಪರ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೂ `12 ಕ್ಕೂ ಹೆಚ್ಚು ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.

ವಿಚಾರಣೆ ಬಳಿಕ ರಾಗಿಣಿ ಜೈಲು ಸೇರಿದ್ದು, ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಗಿಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಗಿಣಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆಯನ್ನು  ಮುಂದೂಡಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ್ ರಾವ್, ನವೀನ್ ಸಿನ್ಹಾ ಹಾಗೂ ಇಂದು ಮಲ್ಹೋತ್ರಾ  ಅವರಿದ್ದ ತ್ರಿಸದಸ್ಯ ಪೀಠದಲ್ಲಿ ಜಾಮೀನು ಅರ್ಜಿವಿಚಾರಣೆ ನಡೆದಿತ್ತು.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿವಪ್ರಕಾಶ್ ಚಿಪ್ಪಿ ಕೋರ್ಟ್ ಆರ್ಡರ್ ಜೊತೆ ನಿನ್ನೆ ಸಿಸಿಬಿ ಎದುರು ಹಾಜರಾಗಿದ್ದು, ವಿಚಾರಣೆ ಎದುರಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಇನ್ನು ರಾಗಿಣಿ ದ್ವಿವೇದಿ ಜಾಮೀನಿನ ಹಾದಿ ಸುಗಮ ಎಂದು ಅಂದಾಜಿಸಲಾಗಿತ್ತು.

ಆದರೆ ಈಗಲೂ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿರೋದರಿಂದ ರಾಗಿಣಿಗೇ ಜೈಲೇ ಗತಿಯಾಗಿದೆ. ಇದೇ ಪ್ರಕರಣದಲ್ಲಿ ಜೈಲು ಸೇರಿದ್ದ ಇನ್ನೊರ್ವ ಆರೋಪಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣ ಮುಂದಿಟ್ಟು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದಾರೆ.

Comments are closed.