ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಗೆ ಬಿಗ್ ಟ್ವೀಸ್ಟ್ : ನಟ ವಿವೇಕ್ ಓಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

0

ಮುಂಬೈ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಲಿವುಡ್ ನಟ ವಿವೇಕ್ ಓಬೆರಾಯ್ ಸಿಸಿಬಿ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ. ಮುಂಬೈ ನಿವಾಸದ ಮೇಲೆ ದಾಳಿ ನಡೆಸಿ ಆದಿತ್ವ ಆಳ್ವಗಾಗಿ ಹುಡುಕಾಟ ನಡೆಸಿದ್ದಾರೆ.

ಬಾಲಿವುಡ್ ನಟ ವಿವೇಕ್ ಓಬೆರಾಯ್ ಪತ್ನಿಯ ಸಹೋದರ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ ವಿರುದ್ದ ಡ್ರಗ್ಸ್ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದು, ಪ್ರಕರಣದಲ್ಲಿ ಆದಿತ್ಯ ಆಳ್ವನನ್ನ 6ನೇ ಆರೋಪಿಯನ್ನಾಗಿ ಮಾಡಲಾಗಿದೆ.

ಆದರೆ ಡ್ರಗ್ಸ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆದಿತ್ಯ ಆಳ್ವ ಪರಾರಿಯಾಗಿದ್ದ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದಿತ್ಯ ಆಳ್ವ ವಿವೇಕ್ ಓಬೆರಾಯ್ ಮನೆಯಲ್ಲಿ ಇದ್ದಾನೆ ಅನ್ನೋ ಮಾಹಿತಿಯ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ.

ಮುಂಬೈನ ಜುಹು ಪ್ರದೇಶದಲ್ಲಿರುವ ವಿವೇಕ್ ಓಬೆರಾಯ್ ಮನೆಯ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳ ತಂಡ ಮನೆಯಲ್ಲಿ ಆದಿತ್ಯ ಆಳ್ವನಿಗಾಗಿ ಹುಡುಕಾಟವನ್ನು ನಡೆಸಿದ್ದಾರೆ. ಆದರೆ ದಾಳಿಯ ವೇಳೆಯಲ್ಲಿ ಮನೆಯಲ್ಲಿದ್ದ ಆದಿತ್ಯ ಆಳ್ವ ಇದ್ದಾನಾ ಅನ್ನೋ ಕುರಿತು ಮಾಹಿತಿ ಲಭ್ಯವಾಗಿಲ್ಲ.

Leave A Reply

Your email address will not be published.