ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ಸಿಸಿಬಿ ನೋಟಿಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿನಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದೇಶವನ್ನೇ ತಲ್ಲಣ ಮೂಡಿಸಿತ್ತು. ಇಂದ್ರಜಿತ್ ಲಂಕೇಶ್ ಸಿಡಿಸಿದ್ದ ಬಾಂಬ್ ಹಲವರು ನಟ, ನಟಿಯರ ಬಂಧನಕ್ಕೂ ಕಾರಣವಾಗಿತ್ತು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ಬಂಧನವಾಗಿದೆ.

ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟಿಯರಾದ ಸಂಜನಾ ಗರ್ಲಾನಿ ಹಾಗೂ ರಾಗಿಣಿ ದ್ವಿವೇದಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಸ್ಯಾಂಡಲ್ ವುಡ್ ನಟ, ನಟಿಯರು, ನಿರೂಪಕರು, ಉದ್ಯಮಿಗಳು, ರಾಜಕಾರಣಿಗಳ ಮಕ್ಕಳು ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿದೆ.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಈ ಹಿಂದೆಯೇ ಸಿಸಿಬಿ ವಿಚಾರಣೆಯನ್ನು ಎದುರಿಸಿದ್ದರು. ಇದೀಗ ಮತ್ತೆ ವಿಚಾರಣೆಗೆ ಹಾಜರಾಗಬೇಕು ಅಂತಾ ಸಿಸಿಬಿ ನೋಟೀಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದ್ರಜಿತ್ ಲಂಕೇಶ್ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುವ ಸಾಧ್ಯತೆಯಿದೆ.

https://kannada.newsnext.live/sandalwood-darshan-starwar-prajwal-chandan-sudeep-movies/

Comments are closed.