ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಮುತ್ತಪ್ಪ ರೈ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವ ನಗರ ಹಾಗೂ ಬಿಡದಿಯಲ್ಲಿರುವ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಸ್ಯಾಂಡಲ್ ಡ್ರಗ್ಸ್ ದಂಧೆ ಆರೋಪದಲ್ಲಿ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ನಿವಾಸಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಆದಿತ್ಯ ಆಳ್ವಾ ಜೊತೆಗೆ ಸಂಪರ್ಕದಲ್ಲಿದ್ದರು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲೀಗ ಸಿಸಿಬಿ ಪೊಲೀಸರು ದಾಳಿಯನ್ನು ನಡೆಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳು ಲಭ್ಯವಾದ್ರೆ ರಿಕ್ಕಿ ಶೆಟ್ಟಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.