ರಾಗಿಣಿಗೆ ಸುಪ್ರೀಂ ಶಾಕ್ : ತುಪ್ಪದ ಬೆಡಗಿಗೆ ಇನ್ನೂ 1 ತಿಂಗಳು ಜೈಲು ಫಿಕ್ಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟಿ ರಾಗಿಣಿಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. ಇನ್ನೂ ಒಂದು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರೋದು ಫಿಕ್ಸ್ ಆಗಿದೆ.

ಡ್ರಗ್ಸ್ ಪ್ರಕರಣದ ಆರೋಪ ಹೊತ್ತಿರುವ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಕೂಡ ನಟಿ ಜೈಲಿನಲ್ಲಿ ಬರಮಾಡಿಕೊಳ್ಳಲಿದ್ದಾರೆ.

ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಿಕೆ ಮಾಡಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Comments are closed.