ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿಯ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಇಂದು ನ್ಯಾಯಾಲಯದ ಮುಂದೆ ರಾಗಿಣಿ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಸಿಸಿಬಿ ಅಧಿಕಾರಿಗಳು 8 ದಿನಗಳ ಕಾಲ ತಮ್ಮ ವಶಕ್ಕೆ ಕೇಳುವ ಸಾಧ್ಯತೆಯಿದೆ. ಒಂದೊಮ್ಮೆ ನ್ಯಾಯಾಲಯದ ಸಿಸಿಬಿ ಕಸ್ಟಡಿಗೆ ನೀಡದೇ ಇದ್ರೆ ಜೈಲು ಪಾಲಾಗೋದು ಗ್ಯಾರಂಟಿ.

ಕಳೆದ 8 ದಿನಗಳಿಂದಲೂ ಕೂಡ ನಟಿ ರಾಗಿಣಿ ದ್ವಿವೇದಿ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ರಾಗಿಣಿ ನೀಡಿದ ಮಾಹಿತಿಯನ್ನು ಆಧರಿಸಿಯೇ ಸಿಸಿಬಿ ಅಧಿಕಾರಿಗಳು ಒಬ್ಬೊಬ್ಬರನ್ನೇ ವಶಕ್ಕೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ರಾಗಿಣಿ ಅವರನ್ನು ಡ್ರಗ್ಸ್ ಡೂಪ್ ಟೆಸ್ಟ್ ಗೆ ಒಳಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ರಾಗಿಣಿ ಅವರನ್ನು ಹಾಜರು ಪಡಿಸುವುದು ಕುತೂಹಲ ಮೂಡಿಸಿದೆ.

ಇನ್ನೊಂದೆಡೆ ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಸಿಸಿಹೆಚ್ 33 ನೇ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಕೂಡ ನ್ಯಾಯಾಲಯ ಇಂದು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಡ್ರಗ್ಸ್ ದಂಧೆ ಪ್ರಕರಣ್ಕಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿರುವ ಹಲವು ಪ್ರಕರಣಗಳ ತೀರ್ಪುಗಳನ್ನು ಉಲ್ಲೇಖಿಸಿ ರಾಗಿಣಿ ಪರ ವಕೀಲರು ನ್ಯಾಯಾಲಯದ ಮುಂದೆ ವಾದ ಮಂಡಿಸುವ ಸಾಧ್ಯತೆಯದೆ.