ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಇಂದು ವಿಚಾರಣೆಗೆ ಹಾಜರಾಗಿ ದ್ದಾರೆ. ಮಂಗಳೂರು ಹೊರವಲಯದ ಪಣಂಬೂರಿನಲ್ಲಿರುವ ಎಸಿಪಿ ಕಚೇರಿಗೆ ಆಗಮಿಸಿದ ಅನುಶ್ರೀ ವಿಚಾರಣೆಗೆ ಒಳಪಟ್ಟಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಕಿಶೋರ್ ಅಮನ್ ಶೆಟ್ಟಿ ಹಾಗೂ ತರಣ್ ನಿರೂಪಕಿ ಅನುಶ್ರೀ ಅವರ ವಿಚಾರ ವನ್ನು ಬಾಯ್ಬಿಟ್ಟಿದ್ದಾನೆ. ಅನುಶ್ರೀ ಲಾಕ್ ಡೌನ್ ಸಂದರ್ಭದಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಅನುಶ್ರೀ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ನಿನ್ನೆಯೇ ವಿಚಾರಣೆಗೆ ಹಾಜರಾಗುವುದಾಗಿ ಅನುಶ್ರೀ ಹೇಳಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆಗೆ ಸಿದ್ದತೆ ನಡೆಸಿದ್ದರು. ಆದರೆ ನಿನ್ನೆ ಇಡೀಗ ದಿನ ನಿರೂಪಕಿ ಅನುಶ್ರೀ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಇದು ಪೊಲೀಸ್ ಅಧಿಕಾರಿಗಳನ್ನು ಕೆರಳಿಸಿತ್ತು. ಆದ್ರಿಂದು ಪಣಂಬೂರಿನಲ್ಲಿರುವ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಸುದೀರ್ಘ ಅವಧಿಯವರೆಗೆ ಸಿಸಿಬಿ ಅಧಿಕಾರಿಗಳು ನಿರೂಪಕಿ ಅನುಶ್ರೀಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಈಗಾಗಲೇ ಕಿಶೋರ್ ಅಮನ್ ಶೆಟ್ಟಿ ಹಾಗೂ ತರುಣ್ ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ರಿಪೋರ್ಟ್ ಬಂದಿದೆ. ಮಾತ್ರವಲ್ಲ ಕಿಶೋರ್ ಗೆಳತಿಯರೂ ಕೂಡ ಡ್ರಗ್ಸ್ ಸೇವನೆ ಮಾಡಿರೋದು ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಅನುಶ್ರೀ ಅವರ ವಿಚಾರಣೆಗೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಇನ್ನು ಅನುಶ್ರೀ ವಿಚಾರಣೆಯ ವೇಳೆಯಲ್ಲಿ ಇನ್ನಷ್ಟು ಮಂದಿಯ ಹೆಸರು ಬಹಿರಂಗವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.