ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಳೆದ ಶುಕ್ರವಾರ ನಟಿ ರಾಗಿಣಿ ಅವರನ್ನು ಬಂಧಿಸಿದ್ದ ಸಿಸಿಬಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಪಡೆದಿದ್ದರು.

ಆದ್ರಿಂದ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಇಂದು ಮತ್ತೆ ನಟಿ ರಾಗಿಣಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆಯಲ್ಲಿ ಪ್ರಕರಣದ ಕುರಿತು ವಿಚಾರಣೆಯನ್ನು ನಡೆಸಲು 10 ದಿನಗಳ ಕಾಲ ವಶಕ್ಕೆಕ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು.

ಆದರೆ ಸಿಸಿಬಿ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಜಗದೀಶ್ ಅವರು 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.