ಮಂಗಳವಾರ, ಏಪ್ರಿಲ್ 29, 2025
HomeBreakingಶ್ರೀರಾಮಮಂದಿರ ನಿರ್ಮಾಣಕ್ಕೆ ಸ್ಯಾಂಡಲವುಡ್ ಬೆಡಗಿ ಕೊಡುಗೆ…! ನೀವು ದೇಣಿಗೆ ನೀಡಿ ಎಂದು ಮನವಿ ಮಾಡಿದ ಪ್ರಣೀತಾ…!!

ಶ್ರೀರಾಮಮಂದಿರ ನಿರ್ಮಾಣಕ್ಕೆ ಸ್ಯಾಂಡಲವುಡ್ ಬೆಡಗಿ ಕೊಡುಗೆ…! ನೀವು ದೇಣಿಗೆ ನೀಡಿ ಎಂದು ಮನವಿ ಮಾಡಿದ ಪ್ರಣೀತಾ…!!

- Advertisement -

ಹಿಂದೂಗಳ ಪ್ರತಿಷ್ಠೆಯ ಸಂಕೇತವಾದ ಶ್ರೀರಾಮಮಂದಿರ ನಿರ್ಮಾಣಕ್ಕೆ  ಸಿದ್ಧತೆಗಳು ನಡೆದಿರುವ ಬೆನ್ನಲ್ಲೇ ದೇಶಾದ್ಯಂತ ಶ್ರೀರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹವೂ ನಡೆದಿದೆ. ಸ್ಯಾಂಡಲ್ ವುಡ್ ಬೆಡಗಿ ಹಾಗೂ ಬಹುಭಾಷಾ ನಟಿ ಪ್ರಣೀತಾ ಕೂಡ  ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಕನ್ನಡತಿ ಪ್ರಣೀತಾ ಶ್ರೀರಾಮಮಂದಿರ ನಿರ್ಮಾಣ ಕಾರ್ಯಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದು,  ನೀವು ಉದಾರವಾಗಿ ದೇಣಿಗೆ ನೀಡುವ ಮೂಲಕ ರಾಮಮಂದಿರ ನಿರ್ಮಾಣಕ್ಕೆ ನಿಮ್ಮ ಕೊಡುಗೆ ನೀಡಿ ಎಂದು ವಿಡಿಯೋ ಮಾಡಿ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲೂ ಪೇಜಾವರಶ್ರೀಗಳ ನೇತೃತ್ವದಲ್ಲಿ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಈಅಭಿಯಾನಕ್ಕೆ ಪ್ರಣೀತಾ ಕೂಡ ಕೈಜೋಡಿಸಿದ್ದು, ನೀವು ಕೈಜೋಡಿಸಿ ಎಂದು ಮನವಿ ಮಾಡಿ ಗಮನ ಸೆಳೆದಿದ್ದಾರೆ.

ಪಣ್ರೀತಾ ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಶೇರ್ ಮಾಡಿಕೊಂಡಿದ್ದು, ಇದಕ್ಕೆ ಅಭಿಮಾನಿಗಳು ಸಖತ್ ಖುಷಿಯಾಗಿದ್ದು ವಿಡಿಯೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

2010 ರಲ್ಲಿ ಪೊರ್ಕಿ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ಪ್ರಣೀತಾ ತಮಿಳು ಹಾಗೂ ತೆಲುಗು ಚಿತ್ರಗಳಲ್ಲೂ ನಟಿಸಿದ್ದು ಗಮನ ಸೆಳೆದಿದ್ದಾರೆ.

RELATED ARTICLES

Most Popular