ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ‌ ಸೋಂಕು : ವಿದ್ಯಾರ್ಥಿ, ಶಿಕ್ಷಕರಲ್ಲಿ ಆತಂಕ

ಚಿಕ್ಕಮಗಳೂರು: ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಆರಂಭದಲ್ಲಿ ಶಾಲೆಯ ಓರ್ವ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೀಗ ಶಾಲೆಯ 26 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಜಿಲ್ಲೆಯ ಜನರಲ್ಲಿ  ಆತಂಕ ಮೂಡಿಸಿದೆ.

ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ 400ಕ್ಕೂ ಅಧಿಕ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು.
ಇದೀಗ ಕೆಲವರ ವರದಿ ಬಂದಿದ್ದು, ಅದೇ ಶಾಲೆಯ 26 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ವಿದ್ಯಾರ್ಥಿನಿಯಿಂದಲೇ ಸೋಂಕು ತಗುಲಿದೆ ಎಂಬ ಅನುಮಾನ ಮೂಡಿದೆ.

https://kannada.newsnext.live/corona-hike-governament-declare-holiday/amp/

ಕಾಫಿನಾಡು ಚಿಕ್ಕಮಗಳೂರಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 98 ಪ್ರಕರಣಗಳು ಪತ್ತೆಯಾಗಿದ್ದು,‌ಮಹಾಮಾರಿ ದಂಪತಿಯನ್ನು ಬಲಿಪಡೆದಿದೆ. 

ಅಲ್ಲದೇ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ವಸತಿ ಶಾಲೆಯಲ್ಲೂ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೀಗ ಇನ್ನಷ್ಟು ವಿದ್ಯಾರ್ಥಿಗಳ ತಪಾಸಣಾ ವರದಿ ಬರಲಿದ್ದು, ಆತಂಕ ಶುರುವಾಗಿದೆ.

Comments are closed.